Publish Date: Thu, 22 Jul 2021 (11:42 IST)
Updated Date: Thu, 22 Jul 2021 (10:11 IST)
ಲಂಡನ್: ಕೌಂಟಿ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಭರ್ಜರಿ ಶತಕ ಗಳಿಸಿದ್ದು, ಆಡುವ ಬಳಗದಲ್ಲಿ ತಮ್ಮ ಸ್ಥಾನ ಪಕ್ಕಾ ಮಾಡಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ರಾಹುಲ್ ಸ್ಥಾನ ಪಡೆಯಲಿದ್ದಾರೆ ಎಂಬ ಮಾತುಗಳಿತ್ತು. ಈ ಶತಕದೊಂದಿಗೆ ಅವರು ತಮ್ಮ ಆಯ್ಕೆ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಅಜೇಯ 101 ರನ್ ಗಳಿಸಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಚೇತೇಶ್ವರ ಪೂಜಾರ ವಿಫಲರಾಗಿದ್ದರೆ, ಅಜಿಂಕ್ಯಾ ರೆಹಾನೆ, ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಮೂಲಗಳ ಪ್ರಕಾರ ರೆಹಾನೆ ಅಥವಾ ಪೂಜಾರ ಇಬ್ಬರಲ್ಲಿ ಒಬ್ಬರು ಆಡುವ ಬಳಗದಿಂದ ಸ್ಥಾನ ಕಳೆದುಕೊಳ್ಳುವ ಸಾಧ‍್ಯತೆಯಿದೆ.