ಸಿಡ್ನಿ: ಮೂರನೇ ಟೆಸ್ಟ್ ಗೆ ಮುನ್ನ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ರೂಪದಲ್ಲಿ ಆಘಾತ ಸಿಕ್ಕಿದೆ. ಅಭ್ಯಾಸದ ವೇಳೆ ಗಾಯಗೊಂಡ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಆಸ್ಟ್ರೇಲಿಯಾ ಸರಣಿಯಿಂದಲೇ ಹೊರಬಿದ್ದಿದ್ದಾರೆ.
ಅಭ್ಯಾಸ ನಡೆಸುವಾಗ ಮೊಣಕೈಗೆ ಗಾಯ ಮಾಡಿಕೊಂಡಿರುವ ರಾಹುಲ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದರಿಂದಾಗಿ ಅವರು ಮೂರನೇ ಟೆಸ್ಟ್ ನಲ್ಲಾದರೂ ಆಡಬಹುದು ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಕಳೆದ ಎರಡೂ ಟೆಸ್ಟ್ ಗಳಲ್ಲಿ ಅವಕಾಶ ಸಿಗದೇ ಬೆಂಚ್ ಕಾಯಿಸಿದ್ದ ರಾಹುಲ್ ಗೆ ಈ ಟೆಸ್ಟ್ ನಲ್ಲಿ ಅವಕಾಶ ಸಿಗುವ ಸಾಧ‍್ಯತೆಯಿತ್ತು. ಆದರೆ ಅದಕ್ಕೂ ಮೊದಲೇ ಗಾಯಗೊಂಡು ಸರಣಿಯಿಂದ ಹೊರಬಿದ್ದಿರುವುದು ವಿಪರ್ಯಾಸವೇ ಸರಿ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!