Select Your Language

Notifications

webdunia
webdunia
webdunia
webdunia

ಟೆಸ್ಟ್ ತಂಡದಲ್ಲಿ ಮತ್ತೊಂದು ಅವಕಾಶದ ನಿರೀಕ್ಷೆಯಲ್ಲಿ ಕೆಎಲ್ ರಾಹುಲ್

ಟೆಸ್ಟ್ ತಂಡದಲ್ಲಿ ಮತ್ತೊಂದು ಅವಕಾಶದ ನಿರೀಕ್ಷೆಯಲ್ಲಿ ಕೆಎಲ್ ರಾಹುಲ್
ಲಂಡನ್ , ಬುಧವಾರ, 28 ಜುಲೈ 2021 (11:40 IST)
ಲಂಡನ್: ಹಲವು ದಿನಗಳಿಂದ ಟೆಸ್ಟ್ ತಂಡದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ಪ್ರತಿಭಾಂತ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಇಂಗ್ಲೆಂಡ್ ಸರಣಿಯಲ್ಲಾದರೂ ಅವಕಾಶ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.


2018 ರಲ್ಲಿ ಅವಕಾಶ ಕಳೆದುಕೊಂಡಾಗ ಕೋಚ್ ಬಳಿ ಚರ್ಚಿಸಿದ್ದೆ. ಸಾಕಷ್ಟು ವಿಡಿಯೋಗಳನ್ನು ನೋಡಿ ತಪ್ಪು ಏನೆಂದು ತಿಳಿದುಕೊಂಡೆ. ವೈಫಲ್ಯದಿಂದ ಮತ್ತಷ್ಟು ಸ್ಟ್ರಾಂಗ್ ಆಗಿದ್ದೇನೆ. ತಾಳ್ಮೆಯಿಂದ ಕಾದಿದ್ದೇನೆ. ಈಗ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದೇನೆ ಎಂದು ರಾಹುಲ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಈ ಬಾರಿಯ ಸರಣಿಯಲ್ಲಿ ರಾಹುಲ್ ಗೆ ಆಡುವ ಬಳಗದಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿದೆ. ಈಗಾಗಲೇ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿ ರಾಹುಲ್ ತಮ್ಮನ್ನು ಸಾಬೀತುಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಈಡೇರಿತು ಮೀರಾಬಾಯಿ ಆಸೆ: ಕ್ರೀಡಾ ಸಚಿವರೂ ಸಾಥ್!