Publish Date: Thu, 03 Nov 2022 (18:02 IST)
Updated Date: Thu, 03 Nov 2022 (18:05 IST)
ಟೀಂ ಇಂಡಿಯಾದ ಬ್ಯಾಟ್ಸ್‌ಮ್ಯಾನ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‍ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ನೂತನ ದಾಖಲೆ ಬರೆದಿದ್ದಾರೆ. ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ ಭಾರತದ ಪರ 1,000 ರನ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯ ಒಡೆಯರಾಗಿದ್ದ ಕೊಹ್ಲಿ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 15 ರನ್ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್‍ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಟಿ20 ವಿಶ್ವಕಪ್‍ನಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ 1,016 ರನ್ ಬಾರಿಸಿ ಬರೆದಿದ್ದ ದಾಖಲೆಯನ್ನು ಮುರಿದು ನೂತನ ದಾಖಲೆಯ ಒಡೆಯನಾಗಿದ್ದಾರೆ. ಟಿ20 ವಿಶ್ವಕಪ್‍ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಬರೆದಿದ್ದ ಮಹೇಲ ಜಯವರ್ಧನೆ 31 ಇನ್ನಿಂಗ್ಸ್‌ಗಳಿಂದ 1,016 ರನ್ ಬಾರಿಸಿದ್ದರು. ಈ ದಾಖಲೆಯನ್ನು ಕೊಹ್ಲಿ 23 ಇನ್ನಿಂಗ್ಸ್‌ಗಳಿಂದ 1,017 ರನ್ ಬಾರಿಸಿ ಮುರಿದರು.