Publish Date: Thu, 13 Oct 2022 (17:52 IST)
Updated Date: Thu, 13 Oct 2022 (18:43 IST)
ಬಹುನಿರೀಕ್ಷಿತ ICC T20 ವಿಶ್ವಕಪ್ಗಾಗಿ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಬೀಡುಬಿಟ್ಟಿದ್ದು ಇಂದು ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಪರ್ತ್ನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಜಯ ಕಂಡಿತ್ತು. ಇದೀಗ ದ್ವಿತೀಯ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಜಿಮ್ನಲ್ಲಿ ಬೆವರು ಹರಿಸುತ್ತಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಜಿಮ್ನಲ್ಲಿ ಸಖತ್ ಆಗಿ ವರ್ಕೌಟ್ ಮಾಡುತ್ತಿದ್ದಾರೆ. ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರಲಿಲ್ಲ. ಬದಲಾಗಿ ನೆಟ್ನಲ್ಲಿ ಒಬ್ಬರೇ ಸತತವಾಗಿ ಬೆವರು ಹರಿಸುತ್ತಿದ್ದರು. ಇವರಿಗೆ ಕೋಚ್ ರಾಹುಲ್ ದ್ರಾವಿಡ್ ವಿಶೇಷ ತರಬೇತಿ ನೀಡುತ್ತಿದ್ದರು. ಇಂದು ದ್ವಿತೀಯು ವಾರ್ಮ್-ಅಪ್ ಮ್ಯಾಚ್ನಲ್ಲಿ ಕೊಹ್ಲಿ ಆಡುವ ನಿರೀಕ್ಷೆಯಿದೆ. ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಗೆದ್ದಿತಾದರೂ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿರಲಿಲ್ಲ. ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಹರ್ಷಲ್ ಪಟೇಲ್ ಬೌಲಿಂಗ್ನಲ್ಲಿ ಬಲು ದುಬಾರಿ ಆಗಿದ್ದರು. ಇಂದು ಈ ತಪ್ಪುಗಳನ್ನು ಸರಿ ಪಡಿಸಿಕೊಳ್ಳಬೇಕಿದೆ. ದೀಪಕ್ ಹೂಡಾಗೆ ವಿಶ್ರಾಂತಿ ನೀಡಿ ಅವರ ಜಾಗದಲ್ಲಿ ಕೊಹ್ಲಿ ಆಡುವ ಸಂಭವವಿದೆ. ವಾರ್ಮ್-ಅಪ್ ಮ್ಯಾಚ್ಗೂ ಮುನ್ನ ಕೊಹ್ಲಿ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.