Webdunia - Bharat's app for daily news and videos

Install App

ಕೊಹ್ಲಿ ವರ್ಕ್​​​​ಔಟ್​​​ ವಿಡಿಯೋ ವೈರಲ್​​​

Webdunia
ಗುರುವಾರ, 13 ಅಕ್ಟೋಬರ್ 2022 (17:52 IST)
ಬಹುನಿರೀಕ್ಷಿತ ICC T20 ವಿಶ್ವಕಪ್​ಗಾಗಿ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಬೀಡುಬಿಟ್ಟಿದ್ದು ಇಂದು ಎರಡನೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಪರ್ತ್​ನಲ್ಲಿ ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಜಯ ಕಂಡಿತ್ತು. ಇದೀಗ ದ್ವಿತೀಯ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಜಿಮ್​ನಲ್ಲಿ ಬೆವರು ಹರಿಸುತ್ತಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಜಿಮ್​ನಲ್ಲಿ ಸಖತ್ ಆಗಿ ವರ್ಕೌಟ್ ಮಾಡುತ್ತಿದ್ದಾರೆ. ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರಲಿಲ್ಲ. ಬದಲಾಗಿ ನೆಟ್​​ನಲ್ಲಿ ಒಬ್ಬರೇ ಸತತವಾಗಿ ಬೆವರು ಹರಿಸುತ್ತಿದ್ದರು. ಇವರಿಗೆ ಕೋಚ್ ರಾಹುಲ್ ದ್ರಾವಿಡ್ ವಿಶೇಷ ತರಬೇತಿ ನೀಡುತ್ತಿದ್ದರು. ಇಂದು ದ್ವಿತೀಯು ವಾರ್ಮ್​-ಅಪ್ ಮ್ಯಾಚ್​ನಲ್ಲಿ ಕೊಹ್ಲಿ ಆಡುವ ನಿರೀಕ್ಷೆಯಿದೆ. ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಗೆದ್ದಿತಾದರೂ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿರಲಿಲ್ಲ. ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಹರ್ಷಲ್ ಪಟೇಲ್ ಬೌಲಿಂಗ್​ನಲ್ಲಿ ಬಲು ದುಬಾರಿ ಆಗಿದ್ದರು. ಇಂದು ಈ ತಪ್ಪುಗಳನ್ನು ಸರಿ ಪಡಿಸಿಕೊಳ್ಳಬೇಕಿದೆ. ದೀಪಕ್ ಹೂಡಾಗೆ ವಿಶ್ರಾಂತಿ ನೀಡಿ ಅವರ ಜಾಗದಲ್ಲಿ ಕೊಹ್ಲಿ ಆಡುವ ಸಂಭವವಿದೆ. ವಾರ್ಮ್​-ಅಪ್ ಮ್ಯಾಚ್​ಗೂ ಮುನ್ನ ಕೊಹ್ಲಿ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments