Daily Horoscope
✕

ಕನ್ನಡಿಗ ಸೇರಿ ಇಬ್ಬರಿಗೆ ಕೋವಿಡ್ ದೃಢ

Webdunia
ಶನಿವಾರ, 31 ಜುಲೈ 2021 (09:19 IST)
ಕೊಲಂಬೊ(ಜು.31): ಭಾರತೀಯ ಕ್ರಿಕೆಟಿಗರಾದ ಕೃಷ್ಣಪ್ಪ ಗೌತಮ್ ಹಾಗೂ ಯಜುವೇಂದ್ರ ಚಹಲ್ಗೂ ಕೊರೋನಾ ಸೋಂಕು ತಗುಲಿದ್ದು, ಶ್ರೀಲಂಕಾದಲ್ಲೇ ಉಳಿದುಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಕೃನಾಲ್ ಪಾಂಡ್ಯ ಸಹ ಇನ್ನೂ ಐಸೋಲೇಷನ್ನಲ್ಲೇ ಇದ್ದಾರೆ. ಉಳಿದ ಆಟಗಾರರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು, ಅಲ್ಲಿಂದ ನೇರವಾಗಿ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ.

* ಲಂಕಾ ಸರಣಿಯಲ್ಲಿ ಪಾಲ್ಗೊಂಡಿದ್ದ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೆ ಕೊರೋನಾ ಶಾಕ್
* ಕನ್ನಡಿಗ ಕೆ. ಗೌತಮ್ ಸೇರಿ ಇಬ್ಬರಿಗೆ ಕೋವಿಡ್ ಪಾಸಿಟಿವ್
* ಸದ್ಯ ಮೂವರು ಕ್ರಿಕೆಟಿಗರು ಕೊಲಂಬೊದಲ್ಲೇ ಐಸೋಲೇಷನ್
ಕನ್ನಡಿಗ ಕೃಷ್ಣಪ್ಪ ಗೌತಮ್ ಲಂಕಾ ಎದುರಿನ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಟಿ20 ಪಂದ್ಯದಲ್ಲೂ ಗೌತಮ್ಗೆ ಸ್ಥಾನ ಪಡೆಯವ ಸಾಧ್ಯತೆಯಿತ್ತು. ಆದರೆ ಕೃನಾಲ್ ಪಾಂಡ್ಯ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಆಟಗಾರರ ಪೈಕಿ ಚಹಲ್ ಹಾಗೂ ಗೌತಮ್ಗೆ ಇದೀಗ ಕೋವಿಡ್ 19 ದೃಢಪಟ್ಟಿದೆ.
ಕೃನಾಲ್ ಪಾಂಡ್ಯ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇನ್ನುಳಿದ ಆಟಗಾರರ ಪೈಕಿ ಹಾರ್ದಿಕ್ ಪಾಂಡ್ಯ, ಮನೀಶ್ ಪಾಂಡೆ, ದೀಪಕ್ ಚಹರ್ ಹಾಗೂ ಇಶಾನ್ ಕಿಶನ್ ಕೋವಿಡ್ ಟೆಸ್ಟ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಈ ಎಲ್ಲಾ ಆಟಗಾರರು ಶುಕ್ರವಾರ ಬೆಂಗಳೂರಿಗೆ ಬಂದಿಳಿದ್ದಾರೆ.
ಕೃನಾಲ್ಗೆ ಕೊರೋನಾ ತಗುಲಿದ ಕಾರಣ ಅವರೊಂದಿಗೆ ಸಂಪರ್ಕದಲ್ಲಿದ್ದ 8 ಆಟಗಾರರನ್ನು ಐಸೋಲೇಷನ್ನಲ್ಲಿ ಇರಿಸಲಾಗಿತ್ತು. ಟಿ20 ಸರಣಿ ಮುಗಿದ ಬಳಿಕ ಶುಕ್ರವಾರ ಭಾರತಕ್ಕೆ ಹೊರಡುವ ಮುನ್ನ ಐಸೋಲೇಷನ್ನಲ್ಲಿದ್ದ ಆಟಗಾರರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಯುಜುವೇಂದ್ರ ಚಹಲ್ ಹಾಗೂ ಗೌತಮ್ಗೆ ಸೋಂಕು ತಗುಲಿರುವುದು ಪತ್ತೆಯಾಯಿತು.
ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಲಂಕಾ ಎದುರಿನ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು. ಇನ್ನು ಟಿ20 ಸರಣಿಯನ್ನು ಗೆಲುವಿನೊಂದಿಗೆ ಶುಭಾರಂಭ ಮಾಡಿತ್ತು. ಆದರೆ ಎರಡನೇ ಟಿ20 ಪಂದ್ಯ ಆರಂಭಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡಕ್ಕೆ ಕೋವಿಡ್ ಶಾಕ್ ನೀಡಿದ್ದರಿಂದ ಪ್ರಮುಖ 8 ಆಟಗಾರರು ಐಸೋಲೇಷನ್ಗೆ ಒಳಗಾಗಬೇಕಾಯಿತು. ಹೀಗಾಗಿ ಕೊನೆಯ ಎರಡು ಟಿ20 ಪಂದ್ಯಗಳನ್ನು ಶ್ರೀಲಂಕಾ ಕ್ರಿಕೆಟ್ ತಂಡವು ಜಯ ಸಾಧಿಸುವ ಮೂಲಕ ಚುಟುಕು ಕ್ರಿಕೆಟ್ ಸರಣಿಯನ್ನು ದ್ವೀಪ ರಾಷ್ಟ್ರ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments