Publish Date: Thu, 20 Oct 2016 (08:43 IST)
Updated Date: Thu, 20 Oct 2016 (12:58 IST)
ನವದೆಹಲಿ: ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಕೋಚ್ ಅನಿಲ್ ಕುಂಬ್ಳೆ ಅವರ ಪರವಾಗಿ ಮಾತನಾಡಿದ್ದಾರೆ.
“ಧೋನಿ ಅನುಭವಿ ಆಟಗಾರ. ಅವರಿಗೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಅನುಭವವಿದೆ. ಈಗಲೂ ಅವರು ಉತ್ತಮ ಗೇಮ್ ಫಿನಿಶರ್. ಅವರು ಕ್ರೀಸ್ ಗೆ ಹೊಂದಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ” ಎಂದು ಧೋನಿ ಪರವಾಗಿ ಮಾತನಾಡಿದ್ದಾರೆ.
ಧೋನಿ ಈಗ ಮೊದಲಿನಂತೆ ಪಂದ್ಯ ಮುಕ್ತಾಯಗೊಳಿಸುವುದಿಲ್ಲ. ಬೇಗನೇ ಆಟಕ್ಕೆ ಕುದುರಿಕೊಳ್ಳುವುದಿಲ್ಲ. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಮೇಲಿನ ಕ್ರಮಾಂಕದಲ್ಲಿ ಆಡಿಸುವುದು ಸೂಕ್ತ ಎಂಬ ಅಭಿಪ್ರಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕುಂಬ್ಳೆ ಈ ಮಾತು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ