ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಕೋಚ್ ಆಗುತ್ತೇನೆಂದು ಬಂದ ಈ ಖ್ಯಾತ ಕ್ರಿಕೆಟಿಗ ಯಾರು ಗೊತ್ತೇ?

Webdunia
ಮಂಗಳವಾರ, 11 ಡಿಸೆಂಬರ್ 2018 (09:47 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ನೂತನ ಕೋಚ್ ಆಯ್ಕೆ ಮಾಡಲು ಇದೀಗ ಬಿಸಿಸಿಐ ಅರ್ಜಿ ಸಲ್ಲಿಸಲು ಕರೆ ನೀಡಿದ್ದು, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರೊಬ್ಬರು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ.


ಟಿ20 ಮಹಿಳಾ ಕ್ರಿಕೆಟ್ ವಿಶ್ವಕಪ್ ನಲ್ಲಿ ವಿವಾದಗಳ ನಂತರ ಕೋಚ್ ರಮೇಶ್ ಪೊವಾರ್ ಅವಧಿ ಮುಗಿದಿದ್ದು, ಅವರನ್ನು ಮುಂದುವರಿಸದೇ ಬಿಸಿಸಿಐ ಹೊಸ ಕೋಚ್ ಆಯ್ಕೆ ನಡೆಸಲು ತೀರ್ಮಾನಿಸಿದೆ. ಹೀಗಾಗಿ ಕೋಚ್ ಗಳ ಆಯ್ಕೆ ಪ್ರಕ್ರಿಯೆಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದೆ.

ಇದೀಗ ಭಾರತದ ಮಾಜಿ ಕ್ರಿಕೆಟಿಗ ಮನೋಜ್ ಪ್ರಭಾಕರ್ ಈ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಪಿಲ್ ದೇವ್-ಮನೋಜ್ ಪ್ರಭಾಕರ್ ಜೋಡಿ ಒಂದು ಕಾಲದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಸ್ಟಾರ್ ಆಗಿದ್ದವರು. ಇದೀಗ ಮನೋಜ್ ಪ್ರಭಾಕರ್ ತೆರೆಮರೆಗೆ ಸರಿದಿದ್ದು, ಕೋಚ್ ಆಗಲು ಬಯಸಿದ್ದಾರೆ. ವಿಶೇಷವೆಂದರೆ ಮನೋಜ್ ಪ್ರಭಾಕರ್ ರನ್ನು ಅದೇ ಕಪಿಲ್ ದೇವ್ ನೇತೃತ್ವದ ಆಯ್ಕೆ ಸಮಿತಿ ಕೋಚ್ ಹುದ್ದೆಗಾಗಿ ಸಂದರ್ಶನ ನಡೆಸಲಿದೆ! ಹಳೇ ಸ್ನೇಹಿತನಿಗೆ ಕಪಿಲ್ ಮಣೆ ಹಾಕುತ್ತಾರಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments