Publish Date: Sat, 13 Mar 2021 (10:21 IST)
Updated Date: Sat, 13 Mar 2021 (10:23 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸೂಪರ್ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಗಳಿಸಿದ ದಾಖಲೆ ಮಾಡಿದ್ದಾರೆ.
ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಗಡಿ ದಾಟಿದ ಕೇವಲ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಸ್ತುತ ಮಿಥಾಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ಪಂದ್ಯಗಳ ನಾಯಕಿ.
ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಸೇರಿ ಅವರು 10 ಸಾವಿರ ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ಪುರುಷರಷ್ಟು ಕ್ರಿಕೆಟ್ ಕೂಟಗಳು ದೊರೆಯುವುದಿಲ್ಲ. ಹಾಗಿದ್ದರೂ ಅವರು ಈ ಅಪರೂಪದ ಸಾಧನೆ ಮಾಡಿರುವುದು ವಿಶೇಷವೇ ಸರಿ.
ಇನ್ನು, ಮಿಥಾಲಿ ಸಾಧನೆಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ಲೋಕ ಅಭಿನಂದನೆ ಸಲ್ಲಿಸಿದೆ. ಸದ್ಯಕ್ಕೆ ಭಾರತ ದ.ಆಫ್ರಿಕಾ ವಿರುದ್ಧ ಏಕದಿನ ಪಂದ್ಯವಾಡುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ಸೋಲನುಭವಿಸಿದೆ.