ಹೈದರಾಬಾದ್: ಕ್ರಿಕೆಟ್ ಆಡಳಿತ ಚುಕ್ಕಾಣಿ ಹಿಡಿಯುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕನಸು ಭಗ್ನವಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ.
ಲೋಧಾ ಸಮಿತಿಯ ಶಿಫಾರಸ್ಸಿನಂತೆ ಈ ಮೊದಲಿನ ಅಧ್ಯಕ್ಷರು ತಮ್ಮ ಸ್ಥಾನ ತ್ಯಜಿಸಬೇಕಾಯಿತು. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಆದರೆ ಅಜರುದ್ದೀನ್ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಇದೀಗ ವಿದ್ಯುತ್ ಜೈಸಿಂಹ ಮತ್ತುಡಾ. ಜಿ. ವಿವೇಕಾನಂದ ಎಂಬಿಬ್ಬರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ.
ಅಜರುದ್ದೀನ್ ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತು ಕ್ರಿಕೆಟ್ ನ ಯಾವುದೇ ಚಟುವಟಿಕೆಗಳಿಂದ ನಿಷೇಧ ಹೇರಲಾಗಿತ್ತು. ಇತ್ತೀಚೆಗಷ್ಟೇ ಅವರ ಮೇಲಿರುವ ಕಳಂಕ ತೆರವಾಗಿತ್ತು. ಈ ಹಿನ್ನಲೆಯಲ್ಲಿ ಅವರು ತಮ್ಮ ತವರಿನ ಕ್ರಿಕೆಟ್ ಆಡಳಿತ ಚುಕ್ಕಾಣಿ ಹಿಡಿಯುವ ಆಶಾಭಾವ ಹೊಂದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ