Select Your Language

Notifications

webdunia
webdunia
webdunia
webdunia

ಈ ವರ್ಷ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಆದಾಯವೆಷ್ಟು ಗೊತ್ತಾ?

ಈ ವರ್ಷ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಆದಾಯವೆಷ್ಟು ಗೊತ್ತಾ?
NewDelhi , ಸೋಮವಾರ, 26 ಡಿಸೆಂಬರ್ 2016 (10:44 IST)
ನವದೆಹಲಿ: ಟೀಂ ಇಂಡಿಯಾದ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲೊಬ್ಬರು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಈ ವರ್ಷ ಅವರಿಬ್ಬರ ಆದಾಯವೆಷ್ಟು ಗೊತ್ತಾ?


ಈ ವರ್ಷ ಹೆಚ್ಚು ಆದಾಯ ಪಡೆದವರ ಪಟ್ಟಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದರೆ, ಧೊನಿ ಐದನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದವರು ಕ್ರಮವಾಗಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್.

17 ಕಂಪನಿಗಳಿಗೆ ಪ್ರಚಾರ ರಾಯಭಾರಿಯಾಗಿರುವ ಕೊಹ್ಲಿ ಈ ವರ್ಷ 134.44 ಕೋಟಿ ರೂ. ಸಂಪಾದಿಸಿದ್ದಾರಂತೆ. ಇತ್ತೀಚೆಗಷ್ಟೇ ಫೋರ್ಬ್ಸ್ ಇಂಡಿಯಾ ಸೆಲೆಬ್ರಿಟಿಗಳ ಪೈಕಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು.

ಇನ್ನು, ಎಂಎಸ್ ಧೋನಿಯ ಈ ವರ್ಷದ ಸಂಪಾದನೆ 122. 48 ಕೋಟಿ ರೂ. ಇವರು ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. ಈ ವರ್ಷ ಧೋನಿ ಜೀವನಾಧಾರಿತ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಉಡುಪಿನಿಂದ ಇಕ್ಕಟ್ಟಿಗೆ ಸಿಲುಕಿದ ಮೊಹಮ್ಮದ್ ಶಮಿ