Publish Date: Tue, 24 May 2022 (11:12 IST)
Updated Date: Tue, 24 May 2022 (09:35 IST)
ಮುಂಬೈ: ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಧಾರದಲ್ಲಿ ಹೆಚ್ಚಿನ ಆಟಗಾರರಿಗೆ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಅವಕಾಶ ನೀಡಲಾಗಿದೆ. ಆದರೆ ರಾಜಸ್ಥಾನ್ ತಂಡವನ್ನು ಪ್ಲೇ ಆಫ್ ಹಂತಕ್ಕೆ ಕೊಂಡೊಯ್ದಿರುವ ಸಂಜು ಸ್ಯಾಮ್ಸನ್ ಗೆ ಅವಕಾಶವೇ ಸಿಕ್ಕಿಲ್ಲ.
ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸಂಜು ಸ್ಯಾಮ್ಸನ್ ಗೆ ಪ್ರತಿಭೆಯಿದ್ದರೂ ಟೀಂ ಇಂಡಿಯಾದಲ್ಲಿ ಅವಕಾಶ ನೀಡಲಾಗಿಲ್ಲ. ಇದರಿಂದಾಗಿ ಟೀಂ ಇಂಡಿಯಾ ಒಬ್ಬ ಅದ್ಭುತ ಪ್ರತಿಭೆಯನ್ನು ಕಳೆದುಕೊಳ್ಳುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ತಂಡಕ್ಕೆ ಆಯ್ಕೆ ಮಾಡಿದ್ದರೂ ಅವರಿಗೆ ಅವಕಾಶ ನೀಡದೇ ಸತಾಯಿಸಲಾಗಿತ್ತು. ಇದೆಲ್ಲಾ ವಿಚಾರಗಳನ್ನಿಟ್ಟುಕೊಂಡು ನೆಟ್ಟಿಗರು ಬಿಸಿಸಿಐಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.