ಮುಂಬೈ: ಟೀಂ ಇಂಡಿಯಾ ಸೀಮಿತ ಓವರ್ ಗಳ ಪಂದ್ಯಗಳಿಗೆ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾರನ್ನು ನಾಯಕರಾಗಿ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆಗೆ ಏಕದಿನ ಸರಣಿಯಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಅವರ ನಾಯಕತ್ವದ ಬಗ್ಗೆ ಟೀಕೆ ಕೇಳಿಬಂದಿತ್ತು. ಕೊಹ್ಲಿ ಬದಲು ರೋಹಿತ್ ರನ್ನು ನಾಯಕರಾಗಿ ಮಾಡಬೇಕು ಎಂಬ ಸಲಹೆಗಳು ಕೇಳಿಬಂದಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಲಕ್ಷ್ಮಣ್ ರೋಹಿತ್ ಅದ್ಭುತ ನಾಯಕ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಗತ್ಯವಿಲ್ಲ. ನಾಯಕರಾಗಿ ಕೊಹ್ಲಿ ಕೂಡಾ ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಅದರ ಅಗತ್ಯವಿದೆಯೆಂದು ನನಗನಿಸುತ್ತಿಲ್ಲ ಎಂದು ಲಕ್ಷ್ಮಣ್ ಹೇಳಿಕೊಂಡಿದ್ದಾರೆ.