ಹರ್ಭಜನ್ ಸಿಂಗ್ ಕನಸಿನ ತಂಡದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನವೇ ಇಲ್ಲ

ಶನಿವಾರ, 7 ಮಾರ್ಚ್ 2020 (09:06 IST)
ಮುಂಬೈ: ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ತಮ್ಮ ಆಲ್ ಟೈಮ್ ಫೇವರಿಟ್ ಟೆಸ್ಟ್ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ಇದರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಸ್ಥಾನ ಕೊಟ್ಟಿಲ್ಲ.


ತಮ್ಮ  ಕನಸಿನ ತಂಡದಲ್ಲಿ ಭಾರತೀಯ ಕ್ರಿಕೆಟಿಗರ ಪೈಕಿ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಗೆ ಮಾತ್ರ ಸ್ಥಾನ ನೀಡಿದ್ದಾರೆ.

 ಅವರ ಹೊರತಾಗಿ ಮ್ಯಾಥ್ಯೂ ಹೇಡನ್, ರಿಕಿ ಪಾಂಟಿಂಗ್, ಕುಮಾರ್ ಸಂಗಕ್ಕಾರ, ಜಾಕ್ ಕ್ಯಾಲಿಸ್, ಶಾನ್ ಪೊಲ್ಲಾಕ್, ಶೇನ್ ವಾರ್ನ್, ವಾಸಿಂ ಅಕ್ರಂ ಮತ್ತು ಗ್ಲೆನ್ ಮೆಕ್ ಗ್ರಾಥ್ ಗೆ ಸ್ಥಾನ ನೀಡಿದ್ದಾರೆ. ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಭಜಿ 2016 ರಿಂದ ಈಚೆಗೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದಿನಿಂದ ರೋಡ್ ಸೇಫ್ಟೀ ಟೂರ್ನಮೆಂಟ್ ಕ್ರಿಕೆಟ್ ಶುರು