ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಆಡುವಾಗ ಬಾಲ್ ಬಡಿದು ಸಾವನ್ನಪ್ಪಿದ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಫಿಲಿಪ್ ಹ್ಯೂಸ್ ಸಾವು “ಹೃದಯ ವಿದ್ರಾವಕ ಘಟನೆ” ಎಂದು ನ್ಯೂ ಸೌತ್ ವೇಲ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಇದೊಂದು ಹೃದಯ ವಿದ್ರಾವಕ ಘಟನೆ. ಆದರೆ ಕ್ರಿಕೆಟ್ ಆಡುವಾಗ ಬಳಸಬೇಕಾದ ಸುರಕ್ಷತಾ ಕ್ರಮಗಳ ಕೊರತೆ ಅಥವಾ ನೀತಿ ನಿಯಮಾವಳಿಗಳ ಉಲ್ಲಂಘನೆಯಿಂದ ಆದ ಘಟನೆಯಲ್ಲ ಎಂದು ನ್ಯಾಯಾಲಯ ತೀರ್ಮಾನಕ್ಕೆ ಬಂದಿದೆ.
2014 ರಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ದೇಶೀಯ ಪಂದ್ಯವೊಂದನ್ನು ಆಡುತ್ತಿದ್ದಾಗ ಹ್ಯೂಸ್ ಗೆ ಕುತ್ತಿಗೆಯ ಹಿಂಭಾಗಕ್ಕೆ ಬಾಲ್ ತಗುಲಿ ಸಾವನ್ನಪ್ಪಿದ್ದರು. ಇದು ಕ್ರಿಕೆಟ್ ವಲಯದಲ್ಲಿ ಭಾರೀ ಸಂಚಲನ ಉಂಟುಮಾಡಿದ ಪ್ರಕರಣವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ