Publish Date: Sat, 24 Jul 2021 (11:05 IST)
Updated Date: Sat, 24 Jul 2021 (11:07 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಟೀಂ ಇಂಡಿಯಾ ಆರಂಭಿಕ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಗೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲು ಸೂಚನೆ ಸಿಕ್ಕಿದೆ ಎನ್ನಲಾಗಿದೆ.
ಇಂಗ್ಲೆಂಡ್ ವಿರುದ್ಧ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಈ ಇಬ್ಬರು ಯುವ ಪ್ರತಿಭಾವಂತ ಆಟಗಾರರನ್ನು ಕರೆಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಬಳಿಕ ನಾಯಕ ಕೊಹ್ಲಿ, ಭವಿಷ್ಯದ ದೃಷ್ಟಿಯಿಂದ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಮಾತನಾಡಿದ್ದರು. ಇದೀಗ ಲಂಕಾ ಪ್ರವಾಸದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಇಬ್ಬರನ್ನು ಇಂಗ್ಲೆಂಡ್ ಗೆ ಕರೆಸಿಕೊಳ್ಳಲಾಗುತ್ತದೆ ಎನ್ನಲಾಗಿದೆ. ಈಗಾಗಲೇ ಶುಬ್ನಂ ಗಿಲ್ ಗಾಯದಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ವಾಷಿಂಗ್ಟನ್ ಸುಂದರ್ ಕೂಡಾ ಅನುಮಾನವಾಗಿದ್ದಾರೆ. ಈ ಸ್ಥಾನಕ್ಕೆ ಇಬ್ಬರನ್ನು ಕರೆಸಿಕೊಳ್ಳಬಹುದು ಎನ್ನಲಾಗಿದೆ.