Publish Date: Tue, 15 Jun 2021 (11:01 IST)
Updated Date: Tue, 15 Jun 2021 (11:02 IST)
ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಗೆ ವಾಲ್ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ದ್ರಾವಿಡ್ ಕೋಚ್ ಆಗಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಅಧಿಕೃತವಾಗಿ ಈಗ ಗಂಗೂಲಿಯೇ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಶಿಖರ್ ಧವನ್ ನೇತೃತ್ವದ ಎರಡನೇ ಟೀಂ ಇಂಡಿಯಾ ತಂಡ ಲಂಕಾ ವಿರುದ್ಧ ಏಕದಿನ ಮತ್ತು ಟಿ20 ಸರಣಿ ಆಡಲಿದೆ. ಅಂಡರ್ 19 ಕೋಚ್ ಆಗಿ ಯಶಸ್ಸು ಕಂಡಿದ್ದ ದ್ರಾವಿಡ್ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕೋಚ್ ಆಗುತ್ತಿದ್ದಾರೆ. ಈಗ ರಾಷ್ಟ್ರೀಯ ತಂಡದಲ್ಲಿ ಯಶಸ್ಸು ಕಾಣುತ್ತಿರುವ ಅನೇಕ ಪ್ರತಿಭೆಗಳು ದ್ರಾವಿಡ್ ಗರಡಿಯಲ್ಲಿ ಪಳಗಿದವರೇ. ಹೀಗಾಗಿ ಈ ಸರಣಿಯಲ್ಲಿ ದ್ರಾವಿಡ್ ಮತ್ತೆ ಯುವಕರಿಗೆ ಮಾರ್ಗದರ್ಶನ ನೀಡಲಿದ್ದಾರೆ.