Webdunia - Bharat's app for daily news and videos

Install App

ಬಾಂಗ್ಲಾ ಪ್ರವಾಸದಿಂದ ರಾಹುಲ್ ಔಟ್

Webdunia
ಭಾನುವಾರ, 7 ಜೂನ್ 2015 (11:03 IST)
ಬಾಂಗ್ಲಾ ಪ್ರವಾಸಕ್ಕೆ ಆಯ್ಕೆಯಾಗಿದ್ದ ಕನ್ನಡಿಗ ಕೆ.ಎಲ್. ರಾಹುಲ್ ಅನಾರೋಗ್ಯದ ಕಾರಣದಿಂದ ಅವಕಾಶವನ್ನು ಕಳೆದುಕೊಳ್ಳುವಂತಾಗಿದೆ.

ಡೆಂಘೆ ಜ್ವರದಿಂದ ಬಳಲುತ್ತಿರುವ ಅವರಿನ್ನು ಸಂಪೂರ್ಣವಾಗಿ ಚೇತರಿಸಿಕೊಳ್ಳದ  ಕಾರಣದಿಂದ  ಬಾಂಗ್ಲಾ ಪ್ರವಾಸದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಥಾಕೂರ್ ಖಚಿತಪಡಿಸಿದ್ದಾರೆ.  
 
ಶನಿವಾರ ಕೋಲಕತ್ತಾದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಹಾಜರಾಗುವಂತೆ ಎಲ್ಲ 15 ಆಟಗಾರರಿಗೂ ತಿಳಿಸಲಾಗಿತ್ತು. ಅನಾರೋಗ್ಯದ ನಡುವೆಯೂ ರಾಹುಲ್ ನಗರಕ್ಕೆ ಬಂದಿದ್ದರು. ಅವರನ್ನು ಪರೀಕ್ಷೆಗೊಳಪಡಿಸಿದ ವೈದ್ಯರು ಅವರ ಆರೋಗ್ಯ ಸುಧಾರಿಸಿಲ್ಲವೆಂಬುದನ್ನು ಖಚಿತ ಪಡಿಸಿದರು. 
 
ಕಳೆದ ವರ್ಷ ಮೆಲ್ಬೋರ್ನ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ 23ರ ಹರೆಯದ ರಾಹುಲ್ ಮೊದಲ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಎರಡು ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 3 ಮತ್ತು 1 ರನ್‌ಗೆ ಪೆವಿಲಿಯನ್‌ಗೆ ಮರಲಿದ್ದ ಅವರು ಸಿಡ್ನಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಕರ್ಷಕ ಶತಕ ಬಾರಿಸಿ ಗಮನ ಸೆಳೆದಿದ್ದರು. 
 
ಆಸ್ಟ್ರೇಲಿಯಾದಿಂದ ಮರಳಿದ ಬಳಿಕ  ರಣಜಿ ಪಂದ್ಯಾವಳಿಯಲ್ಲಿ  93.11 ಸರಾಸರಿಯಲ್ಲಿ 838 ರನ್ ಗಳಿಸಿದ್ದರು. ಅದರಲ್ಲಿ ಉತ್ತರ ಪ್ರದೇಶದ ವಿರುದ್ಧದ ತ್ರಿಶತಕ ಮತ್ತು ಫೈನಲ್‌ನಲ್ಲಿ  ತಮಿಳುನಾಡಿನ ವಿರುದ್ಧ ಗಳಿಸಿದ 188 ರನ್‌ಗಳು ಸೇರಿವೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments