ಮತ್ತೆ ಸೌರವ್ ಗಂಗೂಲಿ ಮೇಲೆ ಕಿಡಿ ಕಾರಿದ ರವಿ ಶಾಸ್ತ್ರಿ

Webdunia
ಮಂಗಳವಾರ, 22 ನವೆಂಬರ್ 2016 (11:53 IST)
ವಿಶಾಖಪಟ್ಟಣಂ: ಕೋಚ್ ಆಯ್ಕೆ ವಿಚಾರದಲ್ಲಿ ರವಿಶಾಸ್ತ್ರಿ ಮತ್ತು ಸೌರವ್ ಗಂಗೂಲಿ ನಡುವೆ ಸಂಬಂಧ ಹಳಸಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆ ಸಂದರ್ಭದಲ್ಲಿ ಅವರಿಬ್ಬರೂ ಪರಸ್ಪರ ಕೆಸರೆರಚಾಟ ಮಾಡಿಕೊಂಡಿದ್ದರು. ಇದೀಗ ಮತ್ತೆ ರವಿ ಶಾಸ್ತ್ರಿ ಗಂಗೂಲಿಯನ್ನು ಕೆಣಕಿದ್ದಾರೆ.

ದ್ವಿತೀಯ ಟೆಸ್ಟ್ ಪಂದ್ಯದ ಕಾಮೆಂಟರಿ ಮಾಡುತ್ತಿರುವಾಗ ರವಿಶಾಸ್ತ್ರಿ ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಗುಣಗಾನ ಮಾಡುತ್ತಿದ್ದರು. ಇವರಿಬ್ಬರನ್ನೂ ವಿದರ್ಭ ಎಕ್ಸ್ ಪ್ರೆಸ್ ಮತ್ತು ಸುಲ್ತಾನ್ ಆಫ್ ಬೆಂಗಾಲ್ ಎಂದು ಹೊಗಳಿದರು.  ಈ ಸಂದರ್ಭದಲ್ಲಿ ಪಕ್ಕದಲ್ಲಿದ್ದ ಇಂಗ್ಲೆಂಡ್ ಕಾಮೆಂಟೇಟರ್ ಇಯಾನ್ ಬಾಥಮ್  ಗಂಗೂಲಿಯನ್ನು ಉದ್ದೇಶಿಸಿ, ಬೆಂಗಾಲದ ರಾಜಕುಮಾರ ಎಂದು ಕರೆಸಿಕೊಂಡವರು ಈಗಾಗಲೇ ಇದ್ದಾರೆಯೇ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ರವಿಶಾಸ್ತ್ರಿ, ಬೆಂಗಲಾಕ್ಕೆ ಒಬ್ಬನೇ ರಾಜಕುಮಾರನಲ್ಲ ಎಂದು ಪರೋಕ್ಷವಾಗಿ ಗಂಗೂಲಿಗೆ ಕುಟುಕಿದರು. ಈ ಬಗ್ಗೆ ಗಂಗೂಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ರವಿ ಶಾಸ್ತ್ರಿ ಹೇಳಿಕೆ ಗಂಗೂಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments