ರಾಜ್ ಕೋಟ್: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ವಿವಾದವೊಂದಕ್ಕೆ ಸಿಲುಕಿದ್ದಾರೆ. ಆದರೆ ಇದು ಕ್ರಿಕೆಟ್ ಗೆ ಸಂಬಂಧಿಸಿದ ವಿವಾದವಲ್ಲ. ಅವರ ಒಡೆತನದ ರೆಸ್ಟೋರೆಂಟ್ ಕಟ್ಟಡವೊಂದು ಅಕ್ರಮ ಎನ್ನುವ ಕಾರಣಕ್ಕೆ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ.
ಬಿಬಿಎಂಪಿಯಂತೆ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿರುವ ರಾಜ್ ಕೋಟ್ ಮಹಾನಗರ ಪಾಲಿಕೆ ಜಡೇಜಾ ಕಟ್ಟಡವನ್ನು ನೆಲಸಮಗೊಳಿಸಿದೆ. ಇದರಿಂದಾಗಿ ಜಡ್ಡು ಫುಡ್ ಫೀಲ್ಡ್ ರೆಸ್ಟೋರೆಂಟ್ ನ 2 ಕೊಠಡಿಗಳನ್ನು ಧ್ವಂಸಗೊಳಿಸಿದೆ.
ಒಟ್ಟಾರೆ ಈ ಸಂದರ್ಭದಲ್ಲಿ ಹಲವಾರು ಮನೆಗಳನ್ನು , ಅಕ್ರಮ ಕಟ್ಟಡಗಳನ್ನು ಮಹಾನಗರ ಪಾಲಿಕೆ ಧರೆಗುರುಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ