Publish Date: Mon, 11 Jan 2021 (09:25 IST)
Updated Date: Mon, 11 Jan 2021 (09:28 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೆರಳಿನ ಗಾಯಕ್ಕೊಳಗಾಗಿರುವ ಆಲ್ ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ.
ಜಡೇಜಾಗೆ ಮೂರನೇ ಟೆಸ್ಟ್ ಪಂದ್ಯದ ವೇಳೆ ಹೆಬ್ಬರಳಿಗೆ ಗಾಯವಾಗಿತ್ತು. ಅವರ ಬೆರಳಿನ ಮೂಳೆಗೆ ಪೆಟ್ಟಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲೂ ಅವರು ಆಡುತ್ತಿಲ್ಲ. ಇನ್ನು, 4-6 ವಾರಗಳವರೆಗೆ ಅವರು ಕ್ರಿಕೆಟ್ ಆಡುವಂತಿಲ್ಲ. ಹಾಗಾಗಿ ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೂ ಅವರು ಲಭ್ಯರಿರುವುದಿಲ್ಲ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.