Publish Date: Thu, 04 Jul 2019 (10:54 IST)
Updated Date: Thu, 04 Jul 2019 (10:56 IST)
ಲಂಡನ್: ತಮ್ಮ ಬಗ್ಗೆ ಕೇವಲವಾಗಿ ಮಾತನಾಡಿದ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಎಚ್ಚರಿಕೆ ಕೊಟ್ಟಿದ್ದಾರೆ.
ಜಡೇಜಾರಂತಹ ಸಣ್ಣ ಪುಟ್ಟ ಕ್ರಿಕೆಟಿಗರ ಬಗ್ಗೆ ನನಗೆ ಆಸಕ್ತಿಯಿಲ್ಲ ಎಂದು ಸಂಜಯ್ ಮಂಜ್ರೇಕರ್ ಉಡಾಫೆಯ ಮಾತನಾಡಿದ್ದರು. ಅಷ್ಟೇ ಅಲ್ಲ, ಧೋನಿ ಅಭ್ಯಾಸ ಪಂದ್ಯದಲ್ಲಿ ಆಡಿದ ರೀತಿಗೂ, ವಿಶ್ವಕಪ್ ನಲ್ಲಿ ಆಡಿದ ರೀತಿಗೂ ಹೋಲಿಕೆ ಮಾಡಿ ಟೀಕೆ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಡೇಜಾ ನಿಮಗಿಂತ ಹೆಚ್ಚು ಪಂದ್ಯಗಳನ್ನು ಆಡಿದ್ದೇನೆ ಮತ್ತು ಈಗಲೂ ಆಡುತ್ತಿದ್ದೇನೆ. ಸಾಧನೆ ಮಾಡಿದವರನ್ನು ಗೌರವಿಸಲು ಕಲಿಯಿರಿ. ನಿಮ್ಮ ಮಾತಿನ ವಾಕರಿಗೆ ಬಗ್ಗೆ ಸಾಕಷ್ಟು ಕೇಳಿದ್ದೇನೆ. ಸಾಕಾಗಿದೆ ಇದನ್ನು ಕೇಳಿ ಎಂದು ತಿರುಗೇಟು ನೀಡಿದ್ದಾರೆ.