Publish Date: Sat, 04 May 2024 (20:01 IST)
Updated Date: Sat, 04 May 2024 (20:04 IST)
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದಿನ ಪಂದ್ಯಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.
ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದಿರುವ ಫಫ್ ಡುಪ್ಲೆಸಿ ಬಳಗವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದೆರಡು ಪಂದ್ಯಗಳಲ್ಲಿ ಸತತ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ತಂಡವು ತಮ್ಮ ತವರೂರಿನಲ್ಲಿ ಗೆಲುವಿನ ನಿರೀಕ್ಷೆಯಲ್ಲಿದೆ.
ಈ ಸಲದ ಟೂರ್ನಿಯಲ್ಲಿ ಆರ್‌ಸಿಬಿ ಆಡಿರುವ 10 ಪಂದ್ಯಗಳಲ್ಲಿ ಹೆಚ್ಚಿನ ಸೋಲಿನ ಕಹಿಯನ್ನೇ ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಅವರುತವರಿನಂಗಳದಲ್ಲಿ ಆಡಿದ್ದ ನಾಲ್ಕು ಪಂದ್ಯಗಳಲ್ಲಿ ಗೆದ್ದಿದ್ದು ಒಂದು ಮಾತ್ರ.