Publish Date: Tue, 02 Apr 2024 (23:01 IST)
Updated Date: Tue, 02 Apr 2024 (23:09 IST)
ಬೆಂಗಳೂರು: ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರನ್ನು ಪರಿಣಾಮಕಾರಿ ಬೌಲಿಂಗ್ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಕಟ್ಟಿ ಹಾಕಿ ಅಮೋಘ ಗೆಲುವನ್ನು ಪಡೆದುಕೊಂಡಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ ತಂಡವು ಲಕ್ನೋ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಕಳೆದುಕೊಂಡು 20 ಓವರ್‌ಗಳಲ್ಲಿ 181 ರನ್ ಅನ್ನು ಕಲೆ ಹಾಕಿತು.
ಇನ್ನೂ ಸೂಪರ್ ಜೈಂಟ್ಸ್‌ನ ಬಲಶಾಲಿ ಬೌಲಿಂಗ್‌ಗೆ ಆರ್‌ಸಿಬಿ ತಂಡ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಡಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಕ್ಯಾಮರೂನ್ ಗ್ರೀನ್ ಅವರನ್ನು ಅಲ್ಪಾವಧಿಯಲ್ಲಿ ವಾಪಸ್ಸಾದರು.
ಲಕ್ನೋ ಸೂಪರ್ ಜೈಂಟ್ಸ್ ನೀಡಿದ 181 ರನ್ ಅನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು.