ಬೆಂಗಳೂರು: ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾಟದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಈಗಾಗಲೇ ನಡೆದ ಮೂರು ಪಂದ್ಯಗಳಲ್ಲಿ ಆರ್‌ಸಿಬಿ ಒಂದರಲ್ಲಿ ಗೆಲುವು ಸಾಧಿಸಿದೆ. ಇನ್ನೂ ಲಕ್ನೋ ತಂಡ ಆಡಿದ ಎರಡು ಪಂದ್ಯದಲ್ಲಿ ಒಂದರಲ್ಲಿ ಗೆಲುವು ಪಡೆದುಕೊಂಡಿದೆ.
ಕಳೆದ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿದ ಆರ್‌ಸಿಬಿಗೆ ಇದು ಬಹಳ ಮುಖ್ಯವಾದ ಪಂದ್ಯವಾಗಿದೆ. ನಿರೀಕ್ಷೆಯಂತೆಯೇ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆರ್‌ಸಿಬಿ ತಂಡದಲ್ಲಿ ಅಲ್ಜಾರಿ ಜೋಸೆಫ್ ಬದಲಿಗೆ ರೀಸ್ ಟಾಪ್ಲೆ ತಂಡ ಕೂಡಿಕೊಂಡಿದ್ದಾರೆ.
ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಂಡಿರುವ ಕೆ ಎಲ್ ರಾಹುಲ್ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಂಡಿದ್ದು, ಈ ಬಾರಿ ತಂಡದಲ್ಲಿ ಒಂದು ಬದಲಾವಣೆ ಮಾಡಿ ಮೊಯ್ಸಿನ್ ಖಾನ್ ಬದಲಿಗೆ ಯಶ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ.