Publish Date: Tue, 16 Apr 2019 (07:45 IST)
Updated Date: Tue, 16 Apr 2019 (07:47 IST)
ಮುಂಬೈ: ಡೆಲ್ಲಿ ಸೆನ್ಸೇಷನಲ್ ಕ್ರಿಕೆಟಿಗ ರಿಷಬ್ ಪಂತ್ ಟೀಂ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದೇ ಇರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ರಿಷಬ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದಾರೆ. ರಿಷಬ್ ರನ್ನು ವಿಶ್ವಕಪ್ ತಂಡದಿಂದ ಹೊರಗಿಟ್ಟಿರುವುದಕ್ಕೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಸೇರಿದಂತೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಕೂಡಾ ರಿಷಬ್ ರನ್ನು ಹೊರಗಿಟ್ಟು ಭಾರತ ತಪ್ಪು ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಿಷಬ್ ಪ್ರಸಕ್ತ ಫಾರ್ಮ್ ನೋಡಿ ಅವರಿಗೆ ಸ್ಥಾನ ನೀಡಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
Krishnaveni K
Publish Date: Tue, 16 Apr 2019 (07:45 IST)
Updated Date: Tue, 16 Apr 2019 (07:47 IST)