ಮುಂಬೈ ಇಂಡಿಯನ್ಸ್ ಟೀಮ್ಸ್‌ ಜತೆ ಹೋಳಿ ಆಚರಿಸಿದ ರೋಹಿತ್ ಶರ್ಮಾ: ಪೋಟೋ ವೈರಲ್

Sampriya
ಸೋಮವಾರ, 25 ಮಾರ್ಚ್ 2024 (17:05 IST)
Photo Courtesy X
ಮುಂಬೈ: ಟೀಂ ಇಂಡಿಯಾ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೋಮವಾರ ತಮ್ಮ ಐಪಿಎಲ್ ಸಹ ಆಟಗಾರರೊಂದಿಗೆ ಹೋಳಿ ಆಚರಿಸಿ ಸಂಭ್ರಮಿಸಿದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಂಬೈ ಇಂಡಿಯನ್ಸ್ ಸಣ್ಣ ಕ್ಲಿಪ್‌ಅನ್ನು ಹಂಚಿಕೊಂಡಿದ್ದು ಅದರಲ್ಲಿ ರೋಹಿತ್‌ಗೆ ತನ್ನ ಮುಖಕ್ಕೆ ಬಣ್ಣ ಬಳಿದು ಪೈಪ್‌ನಿಂದ ನೀರನ್ನು ಸಿಂಪಡಿಸುತ್ತಿರುವ  ದೃಶ್ಯವಿದೆ.

"ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು! Brb, ಅಡ್ಮಿನ್ ಫೋನ್ ರಿಪೇರಿ ಮಾಡಬೇಕಾಗಿದೆ" ಎಂದು ರೋಹಿತ್ ಕ್ಯಾಮೆರಾಗೆ ನೀರು ಸಿಂಪಡಿಸುತ್ತಿರುವ ವೀಡಿಯೊದ ಶೀರ್ಷಿಕೆಯಾಡಿಯಲ್ಲಿದೆ.

ಮುಂಬೈ ಇಂಡಿಯನ್ಸ್ ತನ್ನ ಐಪಿಎಲ್ 2024 ಸೀಸನ್ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭಾನುವಾರ 6 ರನ್‌ಗಳಿಂದ ಸೋತಿದೆ.

ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗರು ಅಭಿಮಾನಿಗಳಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪೋಸ್ಟ್ ಮಾಡಿದ್ದಾರೆ, "ಈ ಸುಂದರವಾದ ಹೋಳಿ ಹಬ್ಬದಂದು ಎಲ್ಲರಿಗೂ ಸಂತೋಷ ಮತ್ತು ಬಣ್ಣಗಳನ್ನು ಹಾರೈಸುತ್ತೇನೆ. ಬನ್ನಿ, ನಾವೆಲ್ಲರೂ ಒಟ್ಟಾಗಿ ಇದನ್ನು ಸ್ಮರಣೀಯಗೊಳಿಸೋಣ. ಹೋಳಿ ಮತ್ತು ರಂಗ ಪಂಚಮಿಯ ಹೃತ್ಪೂರ್ವಕ ಅಭಿನಂದನೆಗಳು. ಎಲ್ಲರಿಗೂ ಶುಭಾಶಯಗಳು ಮತ್ತು ಹೋಳಿ ಹಬ್ಬದ ಶುಭಾಶಯಗಳು."

ಭಾರತದ ಮಾಜಿ ಕ್ರಿಕೆಟಿಗ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮೆಂಟರ್ ಗೌತಮ್ ಗಂಭೀರ್, "ಎಲ್ಲರಿಗೂ ತುಂಬಾ ಸಂತೋಷ ಮತ್ತು ವರ್ಣರಂಜಿತ ಹೋಳಿ ಶುಭಾಶಯಗಳು" ಎಂದು ಬರೆದಿದ್ದಾರೆ.

ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, "ರಂಗ್ ಬರ್ಸೆ! ನಿಮಗೆ ಪ್ರೀತಿ, ನಗು ಮತ್ತು ಆಶೀರ್ವಾದದಿಂದ ತುಂಬಿದ ಹೋಳಿ ಶುಭಾಶಯಗಳು" ಎಂದು ಪೋಸ್ಟ್ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments