Publish Date: Wed, 30 Dec 2020 (09:33 IST)
Updated Date: Wed, 30 Dec 2020 (09:35 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾಗೆ ತೆರಳಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕ್ವಾರಂಟೈನ್ ಅವಧಿ ಕೊನೆಗೂ ಮುಕ್ತಾಯವಾಗಿದೆ.
ಇಂದಿನಿಂದ ರೋಹಿತ್ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದು, ಅಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ವಾರಂಟೈನ್ ಮುಗಿಸುತ್ತಿರುವ ಖುಷಿಯನ್ನು ರೋಹಿತ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಮೂರನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ರೋಹಿತ್ ಕಣಕ್ಕಿಳಿಯಲಿದ್ದಾರೆ.