Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಲಿರುವ ರೋಹಿತ್ ಶರ್ಮಾ

ವಿರಾಟ್ ಕೊಹ್ಲಿ
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಟಿ20 ಸರಣಿಯಲ್ಲಿ ಹಂಗಾಮಿ ನಾಯಕ ರೋಹಿತ್ ಶರ್ಮಾ, ಖಾಯಂ ನಾಯಕ ವಿರಾಟ್ ಕೊಹ್ಲಿಯ ದಾಖಲೆಯೊಂದನ್ನು ಹಿಂದಿಕ್ಕಲಿದ್ದಾರೆ.


ನಾಳೆಯಿಂದ ಟಿ20 ಸರಣಿಯ ಮೊದಲ ಪಂದ್ಯ ಆರಂಭವಾಗಲಿದ್ದು, ರೋಹಿತ್ ಟಿ20 ಪಂದ್ಯಗಳಲ್ಲಿ ಅತೀ ಹೆಚ್ಚು ಗೆಲುವು ದಾಖಲಿಸಿದ ನಾಯಕ ಎಂಬ ಕೊಹ್ಲಿ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಪಡೆದಿದ್ದಾರೆ.

ರೋಹಿತ್ ಇದುವರೆಗೆ 12 ಪಂದ್ಯಗಳಲ್ಲಿ ಭಾರತವನ್ನು ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ಪೈಕಿ 11 ರಲ್ಲಿ ಗೆಲುವು ಪಡೆದಿದ್ದಾರೆ. ಅತ್ತ ಕೊಹ್ಲಿ 20 ಪಂದ್ಯಗಳಿಗೆ ನಾಯಕರಾಗಿ 11 ರಲ್ಲಿ ಗೆಲುವು ದಾಖಲಿಸಿದ್ದಾರೆ. ಒಂದು ವೇಳೆ ಈ ಸರಣಿಯಲ್ಲಿ ಟೀಂ ಇಂಡಿಯಾ ಒಂದು ಪಂದ್ಯ ಗೆದ್ದರೂ ಆ ದಾಖಲೆ ರೋಹಿತ್ ಪಾಲಾಗಲಿದೆ. ಪಟ್ಟಿಯಲ್ಲಿ 72 ಪಂದ್ಯಗಳಿಂದ 41 ಗೆಲುವು ದಾಖಲಿಸಿದ ಧೋನಿ ಮೊದಲ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ರಜೆ ಮುಗಿಸಿ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ