Publish Date: Thu, 30 Jan 2020 (09:17 IST)
Updated Date: Thu, 30 Jan 2020 (09:19 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ತೃತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದಾಖಲೆ ಮಾಡಿದ್ದಾರೆ.
38 ರನ್ ಗಳಿಸಿ ಔಟಾದ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ನಾಯಕರಾಗಿ ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ಧೋನಿಯನ್ನು ಹಿಂದಿಕ್ಕಿ ಜಾಗತಿಕವಾಗಿ ಮೂರನೇ ಸ್ಥಾನಕ್ಕೇರಿದ್ದಾರೆ.
ಇನ್ನು, ಉಪನಾಯಕ ರೋಹಿತ್ ಶರ್ಮಾ ಹೊಡೆಬಡಿಯ 65 ರನ್ ಗಳಿಸಿದ್ದು, ಈ ಇನಿಂಗ್ಸ್ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರ್ತಿ ಮಾಡಿದ ಕೀರ್ತಿಗೆ ಭಾಜನರಾಗಿದ್ದಾರೆ. ಇದರ ಜತೆಗೆ ಈ ಪಂದ್ಯದ ಜತೆಗೆ ಸರಣಿ ಗೆದ್ದ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ನಲ್ಲಿ ಟಿ20 ಸರಣಿ ಗೆದ್ದ ಸಾಧನೆ ಮಾಡಿತು.