ಪ್ಯಾಲೆಸ್ತೀನ್ ಬೆಂಬಲಿಸಿ ಪೋಸ್ಟ್: ವಿವಾದಕ್ಕೊಳಗಾದ ರೋಹಿತ್ ಶರ್ಮಾ ಪತ್ನಿ ರಿತಿಕಾ

Krishnaveni K
ಬುಧವಾರ, 29 ಮೇ 2024 (14:39 IST)
ಮುಂಬೈ: ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಕಾಳಗದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ ದೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

 
ಗಾಝಾ ಪಟ್ಟಿಯಲ್ಲಿ ಇಸ್ರೇಲ್ ದಾಳಿಯಿಂದಾಗಿ ಸಾಕಷ್ಟು ಜನ ಸಾವಿಗೀಡಾದ ಹಿನ್ನಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಇಂತಹದ್ದೊಂದು ಪೋಸ್ಟ್ ಟ್ರೆಂಡ್ ಆಗಿದೆ.

 
ನಿನ್ನೆ ರಿತಿಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ‘ಆಲ್ ಐಸ್ ಆನ್ ರಾಫಾ’ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಟ್ರೆಂಡಿಂಗ್ ಪೋಸ್ಟ್ ನ್ನು ತಾವೂ ಪೋಸ್ಟ್ ಮಾಡಿದ್ದರು.

ಇದರ ಬೆನ್ನಲ್ಲೇ ಹಲವು ಹಿಂದೂ ಸಂಘಟನೆಗಳು, ಬೆಂಬಲಿಗರು ರಿತಿಕಾರನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದರು. ಯಾವತ್ತಾದರೂ ಹಿಂದೂಗಳ ಮೇಲೆ ದಾಳಿಯಾದಾಗ ಮಾತನಾಡಿದ್ದೀರಾ? ಆಗೆಲ್ಲಾ ಮೌನವಾಗಿರುವ ನೀವು ಈಗ ಪ್ಯಾಲೆಸ್ತೀನ್ ಬೆಂಬಲಿಸಿ ಪೋಸ್ಟ್ ಮಾಡುತ್ತಿರುವುದು ಯಾಕೆ ಎಂದು ರಿತಿಕಾರನ್ನು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಪ್ರಶ್ನಿಸಿದ್ದರು.

ತಮ್ಮ ಪೋಸ್ಟ್ ವಿವಾದವಾಗುತ್ತಿದ್ದಂತೇ ರಿತಿಕಾ ಆ ಪೋಸ್ಟ್ ನ್ನು ಡಿಲೀಟ್ ಮಾಡಿದ್ದಾರೆ. ಆದರೆ ನಟಿ ರಶ್ಮಿಕಾ ಮಂದಣ್ಣ, ರೆಬಲ್ ಸ್ಟಾರ್ ಅಂಬರೀಶ್ ಸೊಸೆ ಅವಿವಾ ಬಿಡ್ಡಪ್ಪಾ ಸೇರಿದಂತೆ ಅನೇಕರು ಈ ಟ್ರೆಂಡಿಂಗ್ ಪೋಸ್ಟ್ ನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಪ್ಯಾಲೆಸ್ತೀನ್ ಗೆ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments