Webdunia - Bharat's app for daily news and videos

Install App

ಹನಿಮೂನ್ ಮೂಡ್ ನಲ್ಲಿದ್ದ ವಿರಾಟ್ ಕೊಹ್ಲಿಗೆ ಊಹಿಸಲೂ ಆಗದ ಶಾಕ್!

Webdunia
ಮಂಗಳವಾರ, 9 ಜನವರಿ 2018 (09:29 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ನಲ್ಲೇ ಸೋತು ಮುಖಭಂಗ ಅನುಭವಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದಕ್ಕೆಲ್ಲಾ ಬ್ಯಾಟ್ಸ್ ಮನ್ ಗಳ ವೈಫಲ್ಯವೇ ಕಾರಣ ಎಂದಿದ್ದಾರೆ.
 

ಮದುವೆ ಮುಗಿಸಿ ಪತ್ನಿ ಅನುಷ್ಕಾ ಜತೆ ಹನಿಮೂನ್ ಮೂಡ್ ನಲ್ಲಿದ್ದ ವಿರಾಟ್ ಕೊಹ್ಲಿಗೆ ಈ ಸೋಲು ನಿಜಕ್ಕೂ ನುಂಗಲಾರದ ಬಿಸಿ ತುಪ್ಪವಾಗಿದೆ. ಇದುವರೆಗಿನ ಯಶಸ್ಸಿನ ಗುಂಗಿನಲ್ಲಿ ಸರಣಿಗೆ ಅಭ್ಯಾಸ ನಡೆಸುವುದನ್ನೂ ಬಿಟ್ಟು ಊರು ಸುತ್ತುತ್ತಿದ್ದ ಕೊಹ್ಲಿ ಮತ್ತು ಇತರ ಕ್ರಿಕೆಟಿಗರು ಅಭ್ಯಾಸವನ್ನು ಗಂಭೀರವಾಗಿ ಪರಿಗಣಿಸದೇ ಇದ್ದಿದ್ದಕ್ಕೆ ಬೆಲೆ ತೆತ್ತಿದ್ದಾರೆ.

ಪಂದ್ಯದ ನಂತರ ಸೋಲಿನ ವಿಶ್ಲೇಷಣೆ ನಡೆಸಿದ ಕೊಹ್ಲಿ ‘ನಮ್ಮ ಬೌಲರ್ ಗಳು 20 ವಿಕೆಟ್ ಕಿತ್ತು ಉತ್ತಮ ಕೆಲಸವನ್ನೇ ಮಾಡಿದ್ದರು. ಆದರೆ ಅವರು ನಿರ್ಮಿಸಿದ ವೇದಿಕೆಯನ್ನು ಸರಿಯಾಗಿ ನಿಭಾಯಿಸಲು ಬ್ಯಾಟ್ಸ್ ಮನ್ ಗಳು ಎಡವಿದರೆ ಬೌಲರ್ ಗಳು ಎಷ್ಟು ಶ್ರಮವಹಿಸಿದರೂ ಬೆಲೆಯಿಲ್ಲ’ ಎಂದು ಕೊಹ್ಲಿ ತಮ್ಮನ್ನು ತಾವೇ ಹಳಿದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ವಿಫಲವಾಗಿದ್ದಕ್ಕೆ ಕೊಹ್ಲಿ ಮೇಲೆ ಅಭಿಮಾನಿಗಳು ಗರಂ ಆಗಿದ್ದರು. ಜತೆಗೆ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮೇಲೂ ಕಿಡಿ ಕಾರಿದ್ದರು. ಪಂದ್ಯದ ನಂತರ ಟೀಂ ಇಂಡಿಯಾದ ಎಲ್ಲಾ ವೇಗಿಗಳನ್ನು ಪ್ರಶಂಸಿಸಿದ ಕೊಹ್ಲಿ ಬ್ಯಾಟಿಂಗ್ ವೈಫಲ್ಯಕ್ಕೆ ಹಳಿದುಕೊಂಡರು. ಈ ಸೋಲಿನ ನೋವನ್ನೇ ಸ್ಪೂರ್ತಿಯಾಗಿಟ್ಟುಕೊಂಡು ಮುಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ಪತ್ನಿಯರ ಜತೆ ಊರು ಸುತ್ತುವುದನ್ನು ಬಿಟ್ಟು ಅಭ್ಯಾಸವನ್ನು ಗಂಭೀರವಾಗಿ ಪರಿಗಣಿಸುತ್ತಾರಾ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments