Publish Date: Mon, 23 Nov 2020 (10:17 IST)
Updated Date: Mon, 23 Nov 2020 (10:18 IST)
ಕೊಚ್ಚಿ: ಕೇರಳ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ. ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಕೆಲವು ವರ್ಷ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಮೇಲಿನ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿತ್ತು. ಇದಾದ ಬಳಿಕ ಶ್ರೀಶಾಂತ್ ಇದೇ ಮೊದಲ ಬಾರಿಗೆ ಕ್ರಿಕೆಟ್ ಮೈದಾನಕ್ಕಿಳಿಯಲಿದ್ದಾರೆ.
ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸುವ ಕೇರಳ ಅಧ್ಯಕ್ಷರ ಟಿ20 ಕ್ರಿಕೆಟ್ ಕೂಟದ ಮೂಲಕ ಶ್ರೀಶಾಂತ್ ಕ್ರಿಕೆಟ್ ಗೆ ಅಧಿಕೃತವಾಗಿ ಮರಳಲಿದ್ದಾರೆ. ಇದು ಡಿಸೆಂಬರ್ ನಲ್ಲಿ ನಡೆಯಲಿದೆ. ಜೈವಿಕ ಸುರಕ್ಷಾ ವಲಯದಲ್ಲಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇದಕ್ಕಾಗಿ ಕೇರಳ ಸರ್ಕಾರದ ಅನುಮತಿ ಕೇಳಲಾಗಿದೆ.