Webdunia - Bharat's app for daily news and videos

Install App

ವಿವಾದಿತ ಯೋ ಯೋ ಟೆಸ್ಟ್ ಬಗ್ಗೆ ಬಾಯ್ಬಿಟ್ಟ ಸಚಿನ್ ತೆಂಡುಲ್ಕರ್

Webdunia
ಮಂಗಳವಾರ, 24 ಜುಲೈ 2018 (09:33 IST)
ಮುಂಬೈ: ಟೀಂ ಇಂಡಿಯಾಕ್ಕೆ ಆಯ್ಕೆಯಾಗಬೇಕಾದರೆ ಈಗ ಯೋ ಯೋ ಫಿಟ್ನೆಸ್ ಟೆಸ್ಟ್ ಪಾಸಾಗಲೇ ಬೇಕು. ಈ ವಿವಾದಿತ ಫಿಟ್ನೆಸ್ ಟೆಸ್ಟ್ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮಾತನಾಡಿದ್ದಾರೆ.

ಟೀಂ ಇಂಡಿಯಾ ಆಟಗಾರರಿಗೆ ಮಾಡಲಾಗುತ್ತಿರುವ ಈ ಫಿಟ್ನೆಸ್ ಟೆಸ್ಟ್ ನಿಂದಾಗಿ ಎಷ್ಟೋ ಪ್ರತಿಭಾವಂತ ಆಟಗಾರರು ತಂಡದಲ್ಲಿ ಸ್ಥಾನ ಗಿಟ್ಟಿಸಲು ವಿಫಲರಾಗಿದ್ದಾರೆ. ಹೀಗಾಗಿ ಈ ಫಿಟ್ನೆಸ್ ಟೆಸ್ಟ್ ಬಗ್ಗೆ ಹಲವರು ತಕರಾರು ತೆಗೆದಿದ್ದಾರೆ.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್ , ಯೋ ಯೋ ಫಿಟ್ನೆಸ್ ಟೆಸ್ಟ್ ಒಂದೇ ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಮಾನದಂಡವಾಗಬಾರದು ಎಂದಿದ್ದಾರೆ. ‘ನಾನು ಇದುವರೆಗೆ ಯೋ ಯೋ ಟೆಸ್ಟ್ ಮಾಡಿಸಿಕೊಂಡಿರಲಿಲ್ಲ. ನಮ್ಮ ಕಾಲದಲ್ಲಿ ಹೆಚ್ಚು ಕಡಿಮೆ ಇದೇ ರೀತಿ ಬೀಪ್ ಟೆಸ್ಟ್ ಅಂತ ಇತ್ತು. ಆದರೆ ಅದುವೇ ಆಟಗಾರನ ಆಯ್ಕೆಗೆ ಮಾನದಂಡವಾಗಬಾರದು. ಫಿಟ್ನೆಸ್ ಮತ್ತು ಆಟಗಾರನ ಸಾಮರ್ಥ್ಯ ನೋಡಿ ತಂಡಕ್ಕೆ ಆಯ್ಕೆ ಮಾಡಬೇಕು’ ಎಂದು ತೆಂಡುಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments