Webdunia - Bharat's app for daily news and videos

Install App

ಒಂದೇ ಒಂದು ಟ್ವೀಟ್ ಗೆ ಸಾನಿಯಾ ಪತಿ, ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಬೆದರಿಕೆಗಳ ಸುರಿಮಳೆ!

Webdunia
ಶನಿವಾರ, 2 ಮಾರ್ಚ್ 2019 (09:35 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣವಿರುವಾಗ ಯಾರು ಏನೇ ಹೇಳಿಕೆ ಕೊಟ್ಟರೂ ವಿವಾದವಾಗುವ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಮಾಡಿದ ಟ್ವೀಟ್ ಒಂದು ಭಾರತೀಯರ ಆಕ್ರೋಶಕ್ಕೆ ತುತ್ತಾಗಿದೆ.


ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿಯೂ ಆಗಿರುವ ಕ್ರಿಕೆಟಿಗ ಶೊಯೇಬ್ ಮಲಿಕ್ ತಮ್ಮ ದೇಶದ ಬಗ್ಗೆ ಹೆಮ್ಮೆಯಿಂದ ‘ಹಮಾರಾ ಪಾಕಿಸ್ತಾನ್ ಜಿಂದಾಬಾದ್’ ಎಂದು ಟ್ವೀಟ್ ಮಾಡಿದ್ದರು.

ಮಲಿಕ್ ಹೀಗೆ ಟ್ವೀಟ್ ಮಾಡುತ್ತಿದ್ದಂತೇ ಟ್ವಿಟರಿಗರು ಅವರ ಮೇಲೆ ಉರಿದುಬಿದ್ದಿದ್ದು, ಇನ್ನು, ಮುಂದೆ ಹೈದರಾಬಾದ್ (ಸಾನಿಯಾ ತವರು) ಕಡೆಗೆ ಬಂದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಮತ್ತೆ ಕೆಲವರು ಈ ವಿಚಾರವಾಗಿ ಸಾನಿಯಾ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೇ ಪುಲ್ವಾಮಾ ದಾಳಿ ಬಗ್ಗೆ ಸಾನಿಯಾ ಮಿರ್ಜಾ ಕೂಡಾ ಟ್ರೋಲ್ ಗೊಳಗಾಗಿದ್ದರು. ಸಾನಿಯಾ ಪಾಕಿಸ್ತಾನವನ್ನು ಖಂಡಿಸಲಿಲ್ಲ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅದಾದ ಬಳಿಕ ಭಾರತ-ಪಾಕಿಸ್ತಾನ ವಿಚಾರವಾಗಿ ಸಾನಿಯಾ ಮೌನಕ್ಕೆ ಜಾರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments