Publish Date: Tue, 28 Jul 2020 (13:19 IST)
Updated Date: Tue, 28 Jul 2020 (13:21 IST)
ಮುಂಬೈ: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಲ್ಲಿ ಆರಂಭಿಕರಾಗಿ ಯಶಸ್ಸು ಪಡೆಯುತ್ತಿರುವುದರಿಂದ ಶಿಖರ್ ಧವನ್ ಗೆ ಇನ್ನು ಸುದೀರ್ಘ ಮಾದರಿಯ ಕ್ರಿಕೆಟ್ ಕನಸಾಗಿಯೇ ಉಳಿಯಬಹುದು ಎಂದು ಕಾಮೆಂಟೇಟರ್ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಸೀಮಿತ ಓವರ್ ಗಳಿಗೆ ಹೋಲಿಸಿದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಧವನ್ ಸಾಧನೆ ಹೇಳಿಕೊಳ್ಳುವಷ್ಟಿಲ್ಲ. ಈಗಾಗಲೇ ಟೆಸ್ಟ್ ಕ್ರಿಕೆಟ್ ನಲ್ಲಿ ಆರಂಭಿಕ ಸ್ಥಾನಕ್ಕೆ ಮಯಾಂಕ್, ರೋಹಿತ್ ಶರ್ಮಾ ಜತೆಗೆ ಯುವ ಪೃಥ್ವಿ ಶಾ ಕೂಡಾ ಪೈಪೋಟಿಯಲ್ಲಿದ್ದಾರೆ. ಹೀಗಾಗಿ ಶಿಖರ್ ಧವನ್ ಗೆ ಸದ್ಯಕ್ಕೆ ಟೆಸ್ಟ್ ಕ್ರಿಕೆಟ್ ನಲ್ಲಿ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.