Publish Date: Wed, 22 Jan 2020 (09:05 IST)
Updated Date: Wed, 22 Jan 2020 (09:07 IST)
ಮುಂಬೈ: ಟೀಂ ಇಂಡಿಯಾದ ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಯುವ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಬಗ್ಗೆ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಹೊಗಳಿದ್ದಾರೆ.
ಮನೀಶ್ ಕೆಳ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಶೊಯೇಬ್ ಅವರನ್ನು ದಿಗ್ಗಜ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿಗೆ ಹೋಲಿಕೆ ಮಾಡಿ ಹೊಗಳಿದ್ದಾರೆ.
‘ಕೊನೆಗೂ ಭಾರತ ತಂಡಕ್ಕೆ ಧೋನಿಯ ಉತ್ತರಾಧಿಕಾರಿ ಸಿಕ್ಕಿದ್ದಾರೆ. ಮನೀಶ್ ಧೋನಿಯ ಸ್ಥಾನವನ್ನು ಸಮರ್ಥವಾಗಿ ತುಂಬಿದ್ದಾರೆ’ ಎಂದು ಸಂದರ್ಶನವೊಂದರಲ್ಲಿ ಶೊಯೇಬ್ ಹೊಗಳಿದ್ದಾರೆ.