Publish Date: Sun, 31 Jan 2021 (13:06 IST)
Updated Date: Sun, 31 Jan 2021 (13:07 IST)
ಕೋಲ್ಕೊತ್ತಾ: ಹೃದಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಎರಡನೇ ಬಾರಿ ಸ್ಟೆಂಟ್ ಅಳವಡಿಕೆ ಚಿಕಿತ್ಸೆಗೊಳಗಾದ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದರಿಂದ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ. ಕೋಲ್ಕೊತ್ತಾದ ಅಪೋಲೋ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಅವರು ದಾಖಲಾಗಿದ್ದರು. ಕೆಲವು ದಿನಗಳ ಹಿಂದೆ ಲಘು ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಒಂದು ಸ್ಟೆಂಟ್ ಅಳವಡಿಕೆ ಮಾಡಲಾಗಿತ್ತು. ಆದರೆ ಮತ್ತೆರಡು ಹೃದಯ ನಾಳಗಳಲ್ಲಿ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮತ್ತೊಮ್ಮೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.