ಕೋಲ್ಕೊತ್ತಾ: ಭಾರತೀಯ ಕ್ರಿಕೆಟ್ ಮಂಡಳಿಗೆ ಹೊಸದಾಗಿ ನಾಲ್ವರು ಆಡಳಿತಾಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಿಸಿದ ಬೆನ್ನಲ್ಲೇ ಹೇಳಿಕೆ ನೀಡಿರುವ ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ವಿದ್ಯಮಾನಗಳನ್ನು ನೋಡಿ ಸಾಕಾಗೋಯ್ತು ಎಂದಿದ್ದಾರೆ.
ಬೆಂಗಾಳ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥರೂ ಆಗಿರುವ ಗಂಗೂಲಿ “ನಾವೆಲ್ಲಾ ಕೆಲವು ದಿನಗಳಿಂದ ಏನು ನಡೆಯುತ್ತಿದೆ ಎಂದು ನೋಡುತ್ತಿದ್ದೇವೆ. ಸಾಕಾಗೋಯ್ತಪ್ಪಾ ನನಗೆ” ಎಂದು ಪತ್ರಕರ್ತರೊಂದಿಗೆ ಮಾತನಾಡುತ್ತಾ ಗಂಗೂಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನಿನ್ನೆಯಷ್ಟೇ ವಿನೋದ್ ರಾಯ್ ನೇತೃತ್ವದ ನಾಲ್ವರು ಆಡಳಿತಾಧಿಕಾರಿಗಳನ್ನು ನೇಮಕ ಮಾಡಿತ್ತು. ಈ ಹಿನ್ನಲೆಯಲ್ಲಿ ಮಾತನಾಡಿದ ಗಂಗೂಲಿ “ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸಲೇಬೇಕು” ಎಂದಿದ್ದಾರೆ. ಹಿಂದೊಮ್ಮೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಹೆಸರು ಕೇಳಿಬಂದಿತ್ತು ಎನ್ನುವುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ