Publish Date: Wed, 16 Aug 2017 (11:18 IST)
Updated Date: Wed, 16 Aug 2017 (11:21 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ತೆರೆ ಮರೆಗೆ ಸರಿದಿದ್ದ ಕ್ರಿಕೆಟಿಗ ಶ್ರೀಶಾಂತ್ ಆರೋಪ ಮುಕ್ತನಾದ ಮೇಲೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ.
ಬಿಸಿಸಿಐಗೆ ಕೇರಳ ಹೈಕೋರ್ಟ್ ಶ್ರೀಶಾಂತ್ ಮೇಲಿನ ನಿಷೇಧ ತೆರವುಗೊಳಿಸಲು ಆದೇಶಿಸಿತ್ತು. ಆದರೆ ಇದಕ್ಕೆ ಬಿಸಿಸಿಐ ಮೀನಾ ಮೇಷ ಎಣಿಸುತ್ತಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದ ಶ್ರೀಶಾಂತ್ ನಂತರ ತಮ್ಮ ವರ್ತನೆಗೆ ಕ್ಷಮೆ ಯಾಚಿಸಿದ್ದರು.
ಇದೀಗ ಸ್ವಾತಂತ್ರ್ಯೋತ್ಸವದ ದಿನ ತಮ್ಮ ತವರಲ್ಲಿ ನಡೆದ ಪ್ರದರ್ಶನ ಪಂದ್ಯವೊಂದರಲ್ಲಿ ಕಣಕ್ಕಿಳಿದಿದ್ದಾರೆ. ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿರುವುದಕ್ಕೆ ಸಂತಸವಾಗಿದೆ ಎಂದು ಶ್ರೀಶಾಂತ್ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.