Select Your Language

Notifications

webdunia
webdunia
webdunia
webdunia

ಡಿಆರ್ ಎಸ್ ಚೀಟಿಂಗ್ ಬಗ್ಗೆ ವಿರಾಟ್ ಕೊಹ್ಲಿ ಟಾಂಗ್

ಡಿಆರ್ ಎಸ್ ಚೀಟಿಂಗ್ ಬಗ್ಗೆ ವಿರಾಟ್ ಕೊಹ್ಲಿ ಟಾಂಗ್
Bangalore , ಬುಧವಾರ, 8 ಮಾರ್ಚ್ 2017 (09:15 IST)
ಬೆಂಗಳೂರು: ದ್ವಿತೀಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಡಿಆರ್ ಎಸ್ ತೆಗೆದುಕೊಳ್ಳಲು ಡ್ರೆಸ್ಸಿಂಗ್ ರೂಂ ಸಹಾಯ ಪಡೆಯಲೆತ್ನಿಸಿ ಟೀಕೆಗೊಳಗಾದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಂಗ್ ಕೊಟ್ಟಿದ್ದಾರೆ.

 
ನಾವು ಡಿಆರ್ ಎಸ್ ತೆಗೆದುಕೊಳ್ಳುವ ವಿಷಯದಲ್ಲಿ ಸಾಕಷ್ಟು ಸಾರಿ ಎಡವಿದ್ದೇವೆ. ಆದರೆ ಯಾವತ್ತೂ ಡಿಆರ್ ಎಸ್ ತೆಗೆದುಕೊಳ್ಳಲು ಡ್ರೆಸ್ಸಿಂಗ್ ರೂಂ ಕಡೆ ನೋಡಿಲ್ಲ. ನಮ್ಮಷ್ಟಕ್ಕೆ ನಾವೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಕೊಹ್ಲಿ ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಅತ್ತ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಕೂಡಾ ತಮ್ಮ ವರ್ತನೆಗೆ ಬೇಸರಿಸಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ನನ್ನ ಬುದ್ಧಿಗೆ ಮಂಕು ಬಡಿದಿತ್ತು. ನಾನು ಡ್ರೆಸ್ಸಿಂಗ್ ರೂಂ ಕಡೆ ನೋಡಬಾರದಿತ್ತು ಎಂದು ಸ್ಮಿತ್ ಪಶ್ಚಾತ್ತಾಪಪಟ್ಟುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟೆಸ್ಟ್ ಪಂದ್ಯ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾಕ್ಕೆ ಶುಭ ಸುದ್ದಿ ಕೊಟ್ಟ ಐಸಿಸಿ