Publish Date: Tue, 06 Feb 2018 (07:16 IST)
Updated Date: Tue, 06 Feb 2018 (07:20 IST)
ನವದೆಹಲಿ : ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಎಎಂ ಖಾನ್ವಿಲ್ಕರ್ ಮತ್ತು ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿ ನಂತರ ನಿಷೇಧಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ವಿವರಣೆ ನೀಡುವಂತೆ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿತು. ಬಿಸಿಸಿಐ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಉತ್ತರಿಸುವಂತೆ ಶ್ರೀಶಾಂತ್ ಅವರಿಗೂ ಕೋರ್ಟ್ ನಾಲ್ಕು ವಾರಗಳ ಕಾಲ ಸಮಯಾವಕಾಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ