Publish Date: Mon, 17 May 2021 (09:38 IST)
Updated Date: Mon, 17 May 2021 (09:39 IST)
ಚೆನ್ನೈ: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಟಿ ನಟರಾಜನ್ ಈಗ ಚೇತರಿಕೆಯ ಹಾದಿಯಲ್ಲಿದ್ದಾರೆ.
ಸದ್ಯದಲ್ಲೇ ಅವರು ರಾಷ್ಟ್ರೀಯ ತಂಡಕ್ಕೆ ವಾಪಸ್ ಆಗುವ ಭರವಸೆಯಲ್ಲಿದ್ದಾರೆ. ತಮ್ಮ ಮನೆಯಲ್ಲಿಯೇ ವರ್ಕೌಟ್ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ನಟರಾಜನ್ ಶೀಘ್ರವೇ ತಂಡಕ್ಕೆ ವಾಪಸ್ ಆಗುವುದಾಗಿ ಹೇಳಿಕೊಂಡಿದ್ದಾರೆ.
ಒಂದು ವೇಳೆ ಅವರು ಫಿಟ್ ಆದರೆ ಮುಂಬರುವ ಶ್ರೀಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಟೀಂ ಇಂಡಿಯಾಕ್ಕೆ ಮರಳುವ ಸಾಧ್ಯತೆಯೂ ಇಲ್ಲದಿಲ್ಲ. ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದ ನಟರಾಜನ್ ಗೆ ಈಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಕೊಳ್ಳಲು ಲಾಕ್ ಡೌನ್ ಅಡ್ಡಿಯಾಗಿದೆ. ಹೀಗಾಗಿ ಚೆನ್ನೈನ ಮನೆಯಲ್ಲಿಯೇ ವರ್ಕೌಟ್ ಮಾಡಿಕೊಳ್ಳುತ್ತಿದ್ದಾರೆ.