ಟಿ20 ಕ್ರಿಕೆಟ್‌ ವಿಶ್ವಕಪ್: ಕಾಮೆಂಟ್ರಿ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆರ್‌ಸಿಬಿಯ ಫಿನಿಷರ್‌ ದಿನೇಶ್ ಕಾರ್ತಿಕ್‌

sampriya
ಶುಕ್ರವಾರ, 24 ಮೇ 2024 (19:25 IST)
Photo By X
ದುಬೈ: ಈ ಬಾರಿ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಬ್ಯಾಟಿಂಗ್‌ ಮತ್ತು ಕೀಪಿಂಗ್‌ನಲ್ಲಿ ಮಿಂಚಿದ್ದ ದಿನೇಶ್‌ ಕಾರ್ತಿಕ್‌ ಅವರು ಜೂನ್‌ನಲ್ಲಿ ನಡೆಯುವ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಆದರೆ, ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ.

ಕ್ರಿಕೆಟ್‌ನ ಎಲ್ಲ ಮಾದರಿಗಳಿಗೆ ಈಚೆಗಷ್ಟೇ ವಿದಾಯ ಹೇಳಿದ ದಿನೇಶ್ ಕಾರ್ತಿಕ್ ಅವರು, ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಮೆರಿಕದ ಜೇಮ್ಸ್‌ ಒಬ್ರೇನ್ ಕಾಮೆಂಟ್ರಿ ಬಾಕ್ಸ್‌ಗೆ ಅವರು ಪದಾರ್ಪಣೆ ಮಾಡಲಿದ್ಧಾರೆ.

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾರ್ತಿಕ್‌ ಉತ್ತಮ ಫಿನಿಷರ್‌ ಪಾತ್ರ ವಹಿಸಿದ್ದರು. ತಂಡವು ಈಚೆಗೆ ಎಲಿಮಿನೇಟರ್ ಪಂದ್ಯದ ಸೋಲಿನ ನಂತರ ಅವರು ಕ್ರಿಕೆಟ್‌ ವಿದಾಯ ಹೇಳಿದ್ದರು.

ಜೂನ್ 2ರಿಂದ 29ರವರೆಗೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟಿ.ವಿ. ವೀಕ್ಷಕ ವಿವರಣೆಕಾರರ ಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶುಕ್ರವಾರ ಬಿಡುಗಡೆ ಮಾಡಿದೆ.  ಭಾರತದ ದಿಗ್ಗಜರಾದ ಸುನಿಲ್ ಗಾವಸ್ಕರ್, ರವಿ ಶಾಸ್ತ್ರಿ  ಹಾಗೂ ಹರ್ಷ ಭೋಗ್ಲೆ ಅವರು ವೀಕ್ಷಕ ವಿವರಣೆಕಾರರ ತಂಡದಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments