ನವದೆಹಲಿ: ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿವೆ.
ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡು ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಇಂದು ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಎಂದಿನಂತೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಮುಂದುವರೆಯಲಿದ್ದು, ಮೊಹಮ್ಮದ್ ಸಿರಾಜ್ ಇಂದು ಕೂಡಾ ತಂಡದಿಂದ ಹೊರಗುಳಿದಿದ್ದಾರೆ.
ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದಲ್ಲಿ ತಸ್ಕಿನ್ ಅಹ್ಮದ್ ಹೊರಗುಳಿದಿದ್ದಾರೆ.
ಸೂಪರ್ 8 ಹಂತದಲ್ಲಿ ಈಗಾಗಲೇ ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯ ಗೆದ್ದಿರುವ ಟೀಮ್ ಇಂಡಿಯಾ, ಇಂದು ಬಾಂಗ್ಲಾದೇಶ ವಿರುದ್ಧ ಗೆದ್ದರೆ ಸೆಮಿಫೈನಲ್ ಸುತ್ತಿಗೆ ಬಹುತೇಕ ಸಮೀಪಿಸಿದಂತಾಗುತ್ತದೆ.