Publish Date: Wed, 13 Nov 2019 (09:35 IST)
Updated Date: Wed, 13 Nov 2019 (09:37 IST)
ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನವಂಬರ್ 22 ರಿಂದ ಆರಂಭವಾಗಲಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ತಯಾರಿ ಆರಂಭಿಸಿದ್ದಾರೆ.
ಇಂಧೋರ್ ನಲ್ಲಿ ನವಂಬರ್ 14 ರಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇದಾದ ಬಳಿಕ ದ್ವಿತೀಯ ಟೆಸ್ಟ್ ಪಂದ್ಯ ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ನಡೆಯಲಿದೆ. ಹೊನಲು ಬೆಳಕಿನ ಪಂದ್ಯಕ್ಕೆ ಪಿಂಕ್ ಬಾಲ್ ಬಳಕೆಯಾಗುತ್ತದೆ.
ಹೀಗಾಗಿ ಈ ಬಾಲ್ ನಲ್ಲಿ ಹೊನಲು ಬೆಳಕಿನಲ್ಲಿ ಆಡಲು ಟೀಂ ಇಂಡಿಯಾ ಆಟಗಾರರು ಇಂಧೋರ್ ನ ಮೈದಾನದಲ್ಲಿಯೇ ಅಭ್ಯಾಸ ಆರಂಭಿಸಿದ್ದಾರೆ. ವಿಶೇಷವಾಗಿ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ ವಿಶೇಷವಾಗಿ ಪಿಂಕ್ ಬಾಲ್ ನಲ್ಲಿ ನೆಟ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಮೂಲಕ ಮೊದಲ ಹೊನಲು ಬೆಳಕಿನ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.