ಮಳೆಯಲ್ಲೇ ಪ್ರೇಕ್ಷಕರ ರಂಜಿಸಿದ ಧೋನಿ, ಕೊಹ್ಲಿ

Webdunia
ಶನಿವಾರ, 14 ಅಕ್ಟೋಬರ್ 2017 (08:50 IST)
ಹೈದರಾಬಾದ್: ಮಳೆಯಿಂದಾಗಿ ಹೈದರಾಬಾದ್ ನಲ್ಲಿ ನಡೆಯಬೇಕಿದ್ದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯ ರದ್ದಾಗಿತ್ತು. ಈ ವೇಳೆ ತಾಳ್ಮೆಯಿಂದ ಕೂತಿದ್ದ ಪ್ರೇಕ್ಷಕರನ್ನು ನಾಯಕ ಕೊಹ್ಲಿ ಮತ್ತು ಧೋನಿ ರಂಜಿಸಿದರು.

 
ಮೈದಾನ ಸಿಬ್ಬಂದಿ ಮೈದಾಣ ಒಣಗಿಸಲು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದರೆ, ಪ್ರೇಕ್ಷಕರು ತಾಳ್ಮೆಯಿಂದಲೇ ಪಂದ್ಯಕ್ಕಾಗಿ ಕಾಯುತ್ತಿದ್ದರು. ಆದರೆ ಅವರ ಆಸೆ ಈಡೇರಲೇ ಇಲ್ಲ. ಮೈದಾನ ಸಿಬ್ಬಂದಿಯ ಪ್ರಯತ್ನ ಕೈಗೂಡದೇ ಪಂದ್ಯ ರದ್ದಾಯಿತು.

ಈ ವೇಳೆ ಮೈದಾನಕ್ಕಿಳಿದ ಭಾರತೀಯ ಆಟಗಾರರು ಬ್ಯಾಟಿಂಗ್ ನಡೆಸಿ ಪ್ರೇಕ್ಷಕರಿಗೆ ಸ್ವಲ್ಪ ಮಟ್ಟಿಗೆ ಖುಷಿ ನೀಡಿದರು. ಬಲಗೈ ಬ್ಯಾಟ್ಸ್ ಮನ್ ಗಳಾದ ಧೋನಿ, ಕೊಹ್ಲಿ ಎಡಗೈಯಲ್ಲಿ ಬ್ಯಾಟಿಂಗ್ ಮಾಡಿ ಪ್ರೇಕ್ಷಕರನ್ನು ರಂಜಿಸಿದದರು. ಕಳೆದೆರಡು ಪಂದ್ಯಕ್ಕೂ ಮಳೆ ಭೀತಿಯಿತ್ತಾದರೂ, ಪಂದ್ಯ ನಡೆದಿತ್ತು. ಆದರೆ ಈ ಬಾರಿ ಸಂಪೂರ್ಣವಾಗಿ ರದ್ದಾಗಿ ಪ್ರೇಕ್ಷಕರಿಗೆ ನಿರಾಸೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments