ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸದೊಂದು ದಾಖಲೆ ಮಾಡಿದ್ದಾರೆ.
ಟೆಸ್ಟ್ ಪಂದ್ಯವೊಂದರ ಒಂದು ಇನಿಂಗ್ಸ್ ನಲ್ಲಿ ಅತೀ ಹೆಚ್ಚು ಬಾರಿ ಗರಿಷ್ಠ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. 38 ನೇ ಬಾರಿ ಕೊಹ್ಲಿ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. 78 ಬಾರಿ ಗರಿಷ್ಠ ರನ್ ಮಾಡಿದ ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಗವಾಸ್ಕರ್ 60, ರಾಹುಲ್ ದ್ರಾವಿಡ್ 53 ಬಾರಿ ಈ ದಾಖಲೆ ಮಾಡಿದ್ದಾರೆ. ಇದೀಗ ಕೊಹ್ಲಿ ಸೆಹ್ವಾಗ್ ಜೊತೆಗೆ 38 ಬಾರಿ ಗರಿಷ್ಠ ರನ್ ಸ್ಕೋರ್ ಮಾಡಿ ನಾಲ್ಕನೇ ಸ್ಥಾನ ಹಂಚಿಕೊಂಡಿದ್ದಾರೆ.