Publish Date: Mon, 27 Nov 2017 (17:13 IST)
Updated Date: Mon, 27 Nov 2017 (17:16 IST)
ಮುಂಬೈ: ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಮೊದಲು ಕೊಹ್ಲಿ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರಂತೆ ಕೊಹ್ಲಿ ಲಂಕಾ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.
ಅದರಂತೆ ಬಿಸಿಸಿಐ ತಂಡವನ್ನು ಆಯ್ಕೆ ಮಾಡಿದ್ದು ಕೊಹ್ಲಿಗೆ ಮಹತ್ವದ ದ.ಆಫ್ರಿಕಾ ಪ್ರವಾಸಕ್ಕೆ ಮೊದಲು ವಿಶ್ರಾಂತಿ ನೀಡಲು ತೀರ್ಮಾನಿಸಿದೆ. ಇನ್ನು ಕನ್ನಡಿಗ ಕೆಎಲ್ ರಾಹುಲ್ ಗೂ ಕೊಕ್ ನೀಡಿರುವುದು ಕನ್ನಡಿಗರಿಗೆ ಶಾಕ್ ನೀಡಿದೆ. ಆದರೆ ಕಳಪೆ ಫಾರ್ಮ್ ನಲ್ಲಿದ್ದರೂ ಕೇದಾರ್ ಜಾದವ್ ರನ್ನು ಉಳಿಸಿಕೊಳ್ಳಲಾಗಿದೆ.
ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಅಜಿಂಕ್ಯಾ ರೆಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾದವ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ